ಪ್ರಥಮ ಬಜೆಟ್‌ನಲ್ಲೇ ಹಿಂದೂ ವಿರೋಧಿ ನೀತಿ ಪ್ರದರ್ಶಿಸಿದ ಕಾಂಗ್ರೆಸ್ ಸರ್ಕಾರ
ರಾಜ್ಯದಲ್ಲಿ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕ ಬಂದಿರುವ ಕಾಂಗ್ರೆಸ್ ಸರ್ಕಾರ ಇಂದು ತನ್ನ ಪ್ರಥಮ ಬಜೆಟ್ ಮಂಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದ ಮೊದಲ ಬಜೆಟ್ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 3.39 ಲಕ್ಷ ಕೋಟಿ ರೂಪಾಯಿ ಮೊತ್ತದ ಬಜೆಟ್ ಮಂಡಿಸಿದ್ದಾರೆ.ಇದರಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ 59,000 ಕೋಟಿ ರೂಪಾಯಿ ವೆಚ್ಚ ಮೀಸಲಿರಿಸಲಾಗಿದೆ.
ಬಜೆಟ್‌ನಲ್ಲಿ ಹಿಂದೂ ವಿರೋಧಿ ನಿಲುವು ತಾಳಿರುವುದು ರಾಜ್ಯದ ಜನತೆಯಲ್ಲಿ ಆಕ್ರೋಶ ತರಿಸಿದೆ. ಈ ಹಿಂದೆ ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಕಾನೂನಿನ ಜೊತೆ ಪ್ರತಿ ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸುವ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು ಮತ್ತು ಅದರಂತೆ ಹಲವಾರು ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆ ಕೂಡಾ ಆಗಿತ್ತು. ಆದರೆ ಸಿದ್ದರಾಮಯ್ಯ ಅವರು ಮಂಡಿಸಿದ ಇಂದಿನ ಬಜೆಟ್‌ನಲ್ಲಿ ಗೋಶಾಲೆ ನಿರ್ಮಾಣದ ಯಾವುದೇ ಪ್ರಸ್ತಾಪ ಇಲ್ಲದೇ ಇರುವುದರಿಂದ ಅದು ರದ್ದಾಗಲಿದೆ.
ಜಿಲ್ಲೆಗೊಂದು ಗೋಶಾಲೆ ಯೋಜನೆಯನ್ನು ರದ್ದುಪಡಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಹಾಗೂ ಅಲ್ಪಸಂಖ್ಯಾತರನ್ನು ಓಲೈಸುವ ತಂತ್ರಕ್ಕೆ ಮುಂದಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ರೈತರು, ಗೋ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮೂಕ ಪ್ರಾಣಿಯ ವಿಚಾರದಲ್ಲಿ ಇಂತಹ ಕಟು ನಿರ್ಧಾರ ಕೈಗೊಂಡಿರುವುದಕ್ಕೆ ಮುಂದಿನ ದಿನಗಳಲ್ಲಿ ಬೆಲೆ ತೆರೆಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
Hi, this is a comment.
To get started with moderating, editing, and deleting comments, please visit the Comments screen in the dashboard.