ರಾಜಕೀಯ
ಹಿಂದೂ ಕಾರ್ಯಕರ್ತನ ಬೆನ್ನಿಗೆ ನಿಂತ ಶಾಸಕ ಹರೀಶ್ ಪೂಂಜ
ಬೆಂಗಳೂರಿನ ಹೋಟೆಲ್ಗಳಿಗೆ ಮಾಂಸ ವಿತರಿಸುವ ವರ್ತಕರು ಹಳಸಿದ ಮತ್ತು ಸಂಶಯಾಸ್ಪದ ರೀತಿಯಲ್ಲಿರುವ ಮಾಂಸಗಳನ್ನು ಪೂರೈಸುವ ವಿಷಯದ ಬಗ್ಗೆ ಕಾರ್ಯಾಚರಣೆ ನಡೆಸಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಿಸಿ ಠಾಣೆಯಲ್ಲಿ ಎಸಿಪಿ ಚಂದನ್ ಅನಾಗರಿಕವಾಗಿ ನಡೆಸಿಕೊಂಡಿರುವುದರ ಬಗ್ಗೆ ಬಿಜೆಪಿ ನಾಯಕರು ಕೆರಳಿ ಕೆಂಡವಾಗಿದ್ದಾರೆ.
ಇಂದು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ತೆರಳಿದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪೊಲೀಸರ ನಡೆಯ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಸಕ ಹರೀಶ್ ಪೂಂಜ ನ್ಯಾಯ ಕೇಳಲು ಬಂದ ನಮ್ಮ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಗೂಂಡಾಗಳಂತೆ ಬಳಸಿಕೊಳ್ಳುತ್ತಿದೆ. ಪ್ರಕರಣ ಬೆಳಕಿಗೆ ತಂದವರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.