ಮುಡಾ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್, ಸಿದ್ದರಾಮಯ್ಯ ಹೆಂಡತಿಯ ಪರವಾಗಿ ತಹಶೀಲ್ದಾರ್ ಅವರಿಂದಲೇ ಫೀಸ್ ಭರ್ತಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಬುಡವನ್ನೇ ಅಲುಗಾಡಿಸುತ್ತಿರುವ ಮುಡಾ ಪ್ರಕರಣ (MUDA SCAM) ಈಗ ಮತ್ತೊಂದು ತಿರುವು ಪಡೆದಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷಿ ತೆರೆದಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಡೆದಿರುವ ಸೈಟ್‌ಗಳ ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಪಾವತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ದಾಖಲೆ ಬಿಡುಗಡೆ ಮಾಡಿರುವ ಸ್ನೇಯಮಯಿ ಕೃಷ್ಣ ಅವರು ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ, ಕ್ರಯಪತ್ರ ನೋಂದಣಿ ಮಾಡಿಸಿಕೊಳ್ಳುವವರು ನೋಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ ಅವರು, ಆ ಸಮಯದಲ್ಲಿ ನನ್ನ ತಾಯಿಗೆ ಹುಷಾರಿರಲಿಲ್ಲ, ರಿಜಿಸ್ಟ್ರೇಷನ್ ಫೀ ತುಂಬಿದ್ರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ (Lokayukta) ಸಿದ್ದರಾಮಯ್ಯ ಅವರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಿದೆ. ನನಗೆ ನ್ಯಾಯ ಸಿಗದಿದ್ದರೆ ನಾನು ಕೋರ್ಟ್‌ಗೆ ಹೋಗುತ್ತೇನೆ ಎಂದು ಸ್ನೇಹಮಯಿ ಎಚ್ಚರಿಸಿದ್ದಾರೆ.