Latest Newsಪ್ರಚಲಿತ

ಫ್ರಾನ್ಸ್‌ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ವಿಶ್ವನಾಯಕ

Share News

ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ ಪ್ರವಾಸದಲ್ಲಿದ್ದು ಈಗಾಗಲೇ ಉಭಯ ರಾಷ್ಟ್ರಗಳ ರಾಜತಾಂತ್ರಿಕ ಸಂಬಂಧವನ್ನು ಗಟ್ಟಿಗೊಳಿಸುವ ಕುರಿತು ಮಾತುಕತೆ ನಡೆಸಿದ್ದಾರೆ. ಫ್ರಾನ್ಸ್‌ ಪ್ರವಾಸದ ನಡುವೆ ಫ್ರಾನ್ಸ್​ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್( Grand Cross of the Legion of Honour) ಗೌರವಕ್ಕೆ ನಮ್ಮ ಪ್ರಧಾನಿ ಭಾಜನರಾಗಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ಪ್ರಧಾನಿ ಮೋದಿ ಅವರು ಈ ಗೌರವ ಸ್ವೀಕರಿಸಿದ್ದಾರೆ.

ಪ್ರಧಾನಿ ಮೋದಿ ಅವರು ಈ ಗೌರವಕ್ಕಾಗಿ ಭಾರತದ ಜನತೆಯ ಪರವಾಗಿ ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಗೌರವಕ್ಕೆ ಪಾತ್ರರಾದ ಮೊದಲ ಭಾರತೀಯ ಪ್ರಧಾನಿ ಎಂಬ ಕೀರ್ತಿ ಕೂಡಾ ಮೋದಿ ಅವರ ಪಾಲಾಗಿದೆ.

ನರೇಂದ್ರ ಮೋದಿ ಅವರನ್ನು ಫ್ರಾನ್ಸ್ ಅದ್ಧೂರಿಯಾಗಿ ಸ್ವಾಗತಿಸಿಕೊಂಡಿದೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹನರ್ ನೀಡುವ ಫೋಟೋಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

Related Articles

Leave a Reply

Your email address will not be published. Required fields are marked *

Back to top button