ಆದಿವಾಸಿಯ ಪಾದತೊಳೆದ ಮಧ್ಯಪ್ರದೇಶ ಸಿಎಂ!
ಮಧ್ಯಪ್ರದೇಶದ ಸಿಧಿಯಲ್ಲಿ ಆದಿವಾಸಿ ಅಮಾಯಕ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಆರೋಪಿ ಪ್ರವೇಶ್ ಶುಕ್ಲಾನ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರ ಆದೇಶಿಸಿದ ಬೆನ್ನಲ್ಲೇ ಹಲವು ವಿದ್ಯಾಮಾನಗಳಿಗೆ ಮಧ್ಯಪ್ರದೇಶ ಕಾರಣವಾಗಿದೆ. ಆರೋಪಿ ಪ್ರವೇಶ್ ಶುಕ್ಲಾನನ್ನು ಈಗಾಗಲೇ ಬಂಧಿಸಲಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸೂಚನೆಯಂತೆ ಪ್ರವೇಶ ಶುಕ್ಲಾನ ಅನಧಿಕೃತ ನಿವಾಸವನ್ನು ಮಧ್ಯಪ್ರದೇಶ ಸರ್ಕಾರದ ಧ್ವಂಸಗೊಳಿಸಿದೆ.
ಮಂಗಳವಾರ ಶುಕ್ಲಾ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು, ಸಾಮಾಜಿಕ ಜಾಲತಾಣ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ನಿರಂತರ ಸುದ್ದಿ ಬಿತ್ತರವಾಗಿ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆದಿವಾಸಿ ವ್ಯಕ್ತಿ ದಶ್ಮತ್ ರಾವತ್ ಅವರ ಪಾದಪೂಜೆ ಮಾಡಿ ಸಮಾಜದಲ್ಲಿ ಸೃಷ್ಟಿಯಾಗಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ದೌರ್ಜ್ಯನ್ಯಕ್ಕೆ ಒಳಗಾದ ಆದಿವಾಸಿ ವ್ಯಕ್ತಿ ದಶ್ಮತ್ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಆದಿವಾಸಿ ಬಂಧುವನ್ನು ಕುರ್ಚಿಯ ಮೇಲೆ ಕೂರಿಸಿ ಅವರ ಪಾದಗಳನ್ನು ತೊಳೆದಿದ್ದಾರೆ. ಬಿಳಿ ಬಟ್ಟೆ ಸುತ್ತಿ ಮಾಲಾರ್ಪಣೆ ಕೂಡಾ ಮಾಡಿದ್ದಾರೆ.
ಪ್ರವೇಶ್ ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ರೇವಾ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ. ಒಂದು ರಾಜ್ಯದ ಮುಖ್ಯಮಂತ್ರಿ ಈ ರೀತಿ ನಡೆದುಕೊಂಡಿರುವುದು ಶ್ಲಾಘನೆಗೆ ಒಳಗಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮುಖ್ಯಮಂತ್ರಿಗಳ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿ
Hi, this is a comment.
To get started with moderating, editing, and deleting comments, please visit the Comments screen in the dashboard.