Latest Newsರಾಜಕೀಯ

ರಾಹುಲ್ ಗಾಂಧಿಯ ಹಿಂದೂ ವಿರೋಧಿ ನೀತಿಯನ್ನು ಸಿದ್ದರಾಮಯ್ಯ ಅನುಷ್ಠಾನಗೊಳಿಸುತ್ತಿದ್ದಾರೆ ; ಶಾಸಕ ಹರೀಶ್‌ ಪೂಂಜ

Share News

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳ ಆವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಹೊರತು ಪಡಿಸಿ ಶಾಲಾ-ಕಾಲೇಜು (School and college grounds) ಆವರಣದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ (Private event) ಅನುಮತಿ ನೀಡಬಾರದು ಎಂದು ದಕ್ಷಿಣ ಕನ್ನಡ (Dakshina Kannada) ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಒಂದೊಮ್ಮೆ ಆದೇಶ ಮೀರಿ ಅನುಮತಿ ನೀಡಿದರೆ ಶಾಲೆಯ ಮುಖ್ಯಸ್ಥರೇ (Head of the school) ಹೊಣೆಗಾರರಾಗಿರುತ್ತಾರೆ ಎಂದು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಇಲಾಖೆಯ ಈ ಆದೇಶದ ವಿರುದ್ಧ ಬೆಳ್ತಂಗಡಿಯ ಶಾಸಕ ಹರೀಶ್‌ ಪೂಂಜ ಸಿಡಿದೆದ್ದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹರೀಶ್‌ ಪೂಂಜ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಹಿಂದೂ ವಿರೋಧಿ ನೀತಿಯನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದರು.


ಹತ್ತಾರು ವರ್ಷಗಳ ಇತಿಹಾಸ ಹೊಂದಿರುವ ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶೋತ್ಸವ ಕಾರ್ಯಕ್ರಮಗಳನ್ನು ಕಾಂಗ್ರೆಸ್‌ ಸರ್ಕಾರ ತಡೆಯುವ ಕೆಲಸ ಮಾಡುತ್ತಿದೆ. ಈ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ, ಹಿಂದೂಗಳ ಧಾರ್ಮಿಕ ಆಚರಣೆಗಳ ಪರವಾಗಿ ನಾವು ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಕಾಂಗ್ರೆಸ್‌ ವಿರುದ್ಧ ಅಬ್ಬರಿಸಿದರು.

ಕಾಂಗ್ರೆಸ್‌ ಸರ್ಕಾರದ ಈ ಸುತ್ತೋಲೆಯಿಂದ ಶಾಲಾ ಮೈದಾನದಲ್ಲಿ ನಡೆಸಲ್ಪಡುವ ಗಣೇಶೋತ್ಸವಗಳಿಗೆ ಸಮಸ್ಯೆ ಎದುರಾಗಲಿದೆ. ಗಣೇಶೋತ್ಸವ ಆಚರಣೆಗೆ ಶಾಲೆಗಳಲ್ಲಿ ಅನುಮತಿ ಕೇಳಿದಾಗ ನಿರಾಕರಣೆ ಮಾಡುತ್ತಿದ್ದಾರೆ. ಬೆಳ್ತಂಗಡಿ ಭಾಗದಲ್ಲಿ ಹಲವು ಕಡೆಗಳಲ್ಲಿ ನಿರಾಕರಣೆ ಮಾಡುತ್ತಿದ್ದು, ಸುತ್ತೋಲೆಯಿಂದ ಆಯೋಜಕರು ಗೊಂದಲಕ್ಕೆ ಸಿಲುಕಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button