Latest Newsರಾಜಕೀಯ

ರಕ್ಷಿತ್‌ ಶಿವರಾಮ್‌ ಆಪ್ತನಿಂದ ಬಿಜೆಪಿ ಮುಖಂಡನ ಮೇಲೆ ತಲವಾರ್‌ ದಾಳಿ

Share News

ದೇಶದೆಲ್ಲೆಡೆ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕಾಯರ್ತಡ್ಕ ಎಂಬಲ್ಲಿ ಬಿಜೆಪಿ ಮುಖಂಡರೊಬ್ಬರ ಮೇಲೆ ತಲವಾರ್‌ ದಾಳಿ ನಡೆಸಿದ ಘಟನೆ ವರದಿಯಾಗಿದೆ.


ಗಾಯಾಳು

ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವದ ಸಂಭ್ರಮದಲ್ಲಿ ಭಾಗಿಯಾಗಿದ್ದ ಬೆಳ್ತಂಗಡಿ ಮಂಡಲ ಬಿಜೆಪಿ ಎಸ್‌ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ನಿಡ್ಡಾಜೆ (33) ಎಂಬವರ ಮೇಲೆ ರಾಜಕೀಯ ದ್ವೇಷದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶ ರಕ್ಷಿತ್ ಶಿವರಾಮ್ ಆಪ್ತ, ಕಳೆಂಜ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಕುಶಾಲಪ್ಪ ಗೌಡ ಎಂಬಾತ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಗಾಯಾಳು ರಾಜೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.


ಆರೋಪಿ

ರಕ್ಷಿತ್ ಶಿವರಾಮ್ ಅವರು ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Related Articles

Leave a Reply

Your email address will not be published. Required fields are marked *

Back to top button